4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ: ಸಿಎಂ ಸಿದ್ದರಾಮಯ್ಯ | JANATA NEWS
ಚಿತ್ರದುರ್ಗ : 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ, ಕೇಂದ್ರ ಸರ್ಕಾರ ಎಷ್ಟಾದರೂ ಬರ ಪರಿಹಾರ ಹಣವನ್ನು ಕೊಡಲಿ. ರಾಜ್ಯ ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲೆಯ ಹಿರಿಯೂರಿನ ಬಬ್ಬೂರು ಫಾರಂನಲ್ಲಿ ಆಯೋಜಿಸಿದ್ದ ಕೃಷಿ ಕೇಂದ್ರದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಥಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಾಳು ಮಾಡಿದ್ದೇ ಅವರು. ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವುತ್ತೂ ಇಷ್ಟು ಪ್ರಮಾಣದ ಸಾಲ ಮಾಡಿರಲಿಲ್ಲ. ಹಾಗಾಗಿ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಅವರಿಗಿಲ್ಲ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. NDRF ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.
195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇನ್ನೂ 15-20 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ. ಆಗಸ್ಟ್ ತಿಂಗಳಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ. ಕೃಷಿ ವಿವಿ, ತೋಟಗಾರಿಕೆ ವಿವಿಗಳಲ್ಲಿ ಹೆಚ್ಚು ಸಂಶೋಧನೆ ಆಗಬೇಕು ಎಂದಿದ್ದಾರೆ.
ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿನ ಸಂಗ್ರಹವಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ.” ಎಂದು ಹೇಳಿದ್ದಾರೆ.