ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು | JANATA NEWS
ರಾಮನಗರ : ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಜೊತೆಗೆ ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಕುಡಿಯುವುದನ್ನು ನೀವು ತಪ್ಪಿಸಲು ಸಾಧ್ಯವಾಗುತ್ತಿಲ್ಲ, ನಾವು ತಪ್ಪಿಸಲು ಸಾಧ್ಯವಾಗುವುದಿಲ್ಲ. ಮದ್ಯದಂಗಡಿ ತೆರೆಯುವ ಬಗ್ಗೆ ಸರ್ಕಾರ ಆರ್ಥಿಕ ಇಲಾಖೆಯ ಮಟ್ಟದಲ್ಲಿ ಆಗಿದ್ದ ತೀರ್ಮಾನ. ಕಳೆದ 30 ವರ್ಷದಿಂದ ಸರ್ಕಾರ ಯಾವುದೇ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ಕೊಟ್ಟಿಲ್ಲ.
ಕೆಲವರು 3-4 ಕೋಟಿ ರೂ.ಗೆ ಲೈಸೆನ್ಸ್ ಮಾರಾಟ ಮಾಡುತ್ತಿದ್ದಾರೆ. ನಾವು ಹಳ್ಳಿ ಹಳ್ಳಿಗೂ ಮದ್ಯದ ಅಂಗಡಿ ಕೊಡುಲು ಆಗೋದಿಲ್ಲ. ಉದ್ಯೋಗ ಯಾವ ರೀತಿ ಮಾಡ್ಬೇಕು ಅಂತ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಎಲ್ಲರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡ್ತಾರೆ. ಕುಡಿಯುವುದನ್ನು ನೀವು ತಪ್ಪಿಸಲು ಸಾಧ್ಯವಿಲ್ಲ, ನಾವು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು ಎಂದು ತಿಳಿದುಬಂದಿದೆ.