ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕ ಅಗ್ನಿ ಅವಘಡ | JANATA NEWS
ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಅಗ್ನಿ ಕಾಣಿಸಿಕೊಂಡಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಇರುವ ಮನ್ ಮುಲ್ ಮೆಗಾ ಡೈರಿಯ ಪ್ಯಾಕಿಂಗ್ ಸೆಕ್ಷನ್ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಮಂಡ್ಯ ಮೆಗಾ ಡೇರಿ ಕಟ್ಟಡ ನಿರ್ಮಾಣಕ್ಕೆ ಆಡಳಿತ ಮಂಡಳಿಯು ಅಗ್ನಿಶಾಮಕ ದಳದಿಂದ NOC ಪಡೆಯದೇ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಕಟ್ಟಡ ನಿರ್ಮಾಣ ಮಾಡಿದೆ ಎಂದು ವರದಿಯಾಗಿದೆ.
English summary :Manmul ghee and khowa manufacturing plant fire