ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ಪ್ಯಾಲೆಸ್ಟೈನ್ ಬೆಂಬಲಿಸಿ ನಿರ್ಣಯ | JANATA NEWS

ನವದೆಹಲಿ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪ್ಯಾಲೆಸ್ಟೈನ್ ಹಕ್ಕುಗಳನ್ನು ಬೆಂಬಲಿಸಿ ನಿರ್ಣಯ ಅಂಗೀಕರಿಸಿದೆ.
ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಸಮಾಧಾನ ವ್ಯಕ್ತಪಡಿಸಿ ಇಸ್ರೇಲ್ ನೊಂದಿಗೆ ಭಾರತ ನಿಲ್ಲಲಿದೆ ಎಂದು ಬೆಂಬಲ ವ್ಯಕ್ತಪಡಿಸಿದ್ದರು ಆದರೆ ಈಗ ವಿರೋಧ ಪಕ್ಷ ಕಾಂಗ್ರೆಸ್ ಇದಕ್ಕೆ ತದ್ವಿರುದ್ಧ ನಿರ್ಣಯ ಅಂಗೀಕರಿಸಿದಂತಾಗಿದೆ.
ಸಿಡಬ್ಲ್ಯೂಸಿ ಸಭೆಯಲ್ಲಿ ಇಸ್ರೇಲ್-ಪ್ಯಾಲೆಸ್ಟೈನ್ (Israel-Palestine) ಸಂಘರ್ಷದ ಬಗ್ಗೆ ದುಃಖ ವ್ಯಕ್ತಪಡಿಸಿ ಕದನ ವಿರಾಮಕ್ಕೆ ಕರೆ ನೀಡಿದೆ. ಅಷ್ಟೇ ಅಲ್ಲದೇ ಪ್ಯಾಲೆಸ್ಟೈನ್ ಜನರ ಹಕ್ಕುಗಳನ್ನು ಬೆಂಬಲಿಸಿದೆ.
English summary :Resolution in support of Palestine by Congress Working Committee