ದೀಪಾವಳಿ ಸನ್ನಿಹಿತ : ಪಟಾಕಿ ನಿಷೇಧಿಸಿ ಸಿಎಂ ಸಿದ್ದರಾಮಯ್ಯ ಆದೇಶ | JANATA NEWS

ಬೆಂಗಳೂರು : ಹಿಂದೂ ಧಾರ್ಮಿಕ ಹಬ್ಬಗಳು ಸಾಲು ಸಾಲಾಗಿ ಆರಂಭ ಆಗುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ
ಮಾನ್ಯ ಸುಪ್ರೀಂ ಕೋರ್ಟ್‌ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.", ಎಂದು ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ.
ವಿಶೇಷವಾಗಿ ಹಿಂದೂ ಸಮುದಾಯದ ಪವಿತ್ರ ಹಬ್ಬವಾದ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವ ಸರ್ಕಾರದ ನಿರ್ಧಾರಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರದ ಪಟಾಕಿ ನಿಷೇಧ ಕೇವಲ ಹಿಂದೂ ಹಬ್ಬಗಳಿಗೆ ಮಾತ್ರ ನಿರ್ಬಂಧ ಏಕೆ ಎಂದು ಹಲವರು ಮುಖ್ಯಮಂತ್ರಿ ಅವರ ಪೋಸ್ಟ್ ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ