ಹಮಾಸ್‌ಗೆ ಜಯವಾಗಲಿ ಎಂದಿದ್ದ ಆರೋಪಿ ಮಂಗಳೂರಿನ ವ್ಯಕ್ತಿ ಝಾಕಿರ್ ಅರೆಸ್ಟ್ | JANATA NEWS

ಮಂಗಳೂರು : ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಝಾಕಿರ್ ಎಂಬಾತ ವಿಡಿಯೋ ಹರಿಬಿಟ್ಟಿದ್ದಾನೆ.
ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು ಎಂದಿದ್ದಾನೆ.
ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಝಾಕಿರ್ ಕರೆ ನೀಡಿದ್ದು ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಿದ್ದಾನೆ. ಅಲ್ಲದೇ ಪ್ಯಾಲೇಸ್ತೀನ್‌ನ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ ಎಂದಿದ್ದಾನೆ.
ಹಮಾಸ್ ಉಗ್ರರಿಗೆ ಬೆಂಬಲ ಸೂಚಿಸಿದ ಆರೋಪ ಹಿನ್ನೆಲೆಯಲ್ಲಿ ಜಾಕಿರ್ ಎನ್ನುವವನ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ ಬಂದರು ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರದೀಪ್ ಕುಮಾರ್ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಬಂದರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ಆರೋಪಿ ಜಾಕೀರ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.