ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ: ತುಟಿಭತ್ಯೆ ಶೇ. 3.75 ಹೆಚ್ಚಳ | JANATA NEWS
ಬೆಂಗಳೂರು : ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿರುವ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 38.75ಕ್ಕೆ ಏರಿಕೆಯಾಗಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 4 ಶೇ. ದಷ್ಟು ಹೆಚ್ಚಿಸಿ ಸಿಹಿ ಸುದ್ದಿ ನೀಡಿತ್ತು. ಅ. 18ರಂದು ಕೇಂದ್ರ ಸರ್ಕಾರ ಈ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ತನ್ನ ನೌಕರರ ಡಿಎಯನ್ನು 3.75 ಶೇ. ಹೆಚ್ಚಿಸಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದೆ.
ಇದೇ ವೇಳೆ ರಾಜ್ಯ ಸರ್ಕಾರ, ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಿಸಿ(ಶೇ 46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.