ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ | JANATA NEWS
ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ ಉಪ ನಿರ್ದೇಶಕಿ ಭಾರತಮ್ಮ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 50 ಲಕ್ಷ ಸಸಿ ವಿತರಣೆ ಬಿಲ್ ಪಾಸ್ ಮಾಡಲು ನಿವೃತ್ತ ಆರ್.ಎಫ್.ಓ ಪರಮೇಶ್ ಬಳಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಿದ್ದಾರೆ.
English summary :Agriculture department official fell into Lokayukta trap while accepting bribe