ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿ ಸಿಎಂ ಸಿದ್ದರಾಮಯ್ಯ | JANATA NEWS
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಆ ಬಳಿಕ ಬೈಪಾಸ್ ಸರ್ಜರಿಗೆ ಒಳಗಾಗಿರುವಂತ ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯವನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿಚಾರಿಸಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಗೃಹ ಸಚಿವರಾದ ಡಾ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹಮದ್ ಅವರು ಈ ವೇಳೆ ಜತೆಗಿದ್ದರು.
ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. pic.twitter.com/UgxtPng5r3
— Siddaramaiah (@siddaramaiah) October 21, 2023