Wed,Jun19,2024
ಕನ್ನಡ / English

ಕಲೆಕ್ಷನ್‌ ಹೆಚ್ಚು ಮಾಡಲು ವಿದ್ಯುತ್ ಕೃತಕ ಅಭಾವ ಸೃಷ್ಟಿ ..ಷಡ್ಯಂತ್ರ - ಕುಮಾರಸ್ವಾಮಿ | JANATA NEWS

22 Oct 2023
1001

ಬೆಂಗಳೂರು : ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ, ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ 'ಶ್ವೇತಪತ್ರ' ಹೊರಡಿಸಿ., ಎಂದು ಸವಾಲು ಹಾಕಿದ್ದಾರೆ.

ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; 1.ವೆಸ್ಟ್‌ ಎಂಡ್‌ 2.ಬಿಜೆಪಿ ಬಿ ಟೀಂ.

ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ?

ಆಧುನಿಕ ಭಾರತದ ಈಸ್ಟ್‌ ಇಂಡಿಯಾ ಕಂಪನಿ ಕಾಂಗ್ರೆಸ್ ಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ @ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ!!!

5 ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್‌ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ. ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ & ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್‌ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ?

ಜಲ ವಿದ್ಯುತ್‌ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್‌ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ..... ..... ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ?

ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ 'ಶ್ವೇತಪತ್ರ' ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ?

ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ'ಧನ' ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ.

English summary :Creation of artificial power shortage to increase collection .. a conspiracy - Kumaraswamy

ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್  ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್ ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ಸಂಸತ್ತಿನಲ್ಲಿ ಎಲ್ಲಾ ಮೂರು ಗಾಂಧಿ ಕುಟುಂಬದ ಸದಸ್ಯರ ಉಪಸ್ಥಿತಿ ಸಾಧ್ಯತೆಗಳೆಷ್ಟು?
ಸಂಸತ್ತಿನಲ್ಲಿ ಎಲ್ಲಾ ಮೂರು ಗಾಂಧಿ ಕುಟುಂಬದ ಸದಸ್ಯರ ಉಪಸ್ಥಿತಿ ಸಾಧ್ಯತೆಗಳೆಷ್ಟು?
ಖಟಾಖತ್ ಯೋಜನೆ : ಕಾಂಗ್ರೆಸ್‌ನ 99, ಎಸ್‌ಪಿ 37 ಸಂಸದರ ಪ್ರಮಾಣ ವಚನ ಸ್ವೀಕಾರ ತಡೆಗೆ ರಾಷ್ಟ್ರಪತಿಗೆ ಪತ್ರ
ಖಟಾಖತ್ ಯೋಜನೆ : ಕಾಂಗ್ರೆಸ್‌ನ 99, ಎಸ್‌ಪಿ 37 ಸಂಸದರ ಪ್ರಮಾಣ ವಚನ ಸ್ವೀಕಾರ ತಡೆಗೆ ರಾಷ್ಟ್ರಪತಿಗೆ ಪತ್ರ
ಎಲೋನ್ ಮಸ್ಕ್ ಹೇಳಿಕೆ ಬೆನ್ನಲ್ಲೇ, ಭಾರತದಲ್ಲಿ ಇವಿಎಂಗಳು ಬ್ಲ್ಯಾಕ್ ಬಾಕ್ಸ್ ಎಂದ ರಾಹುಲ್ ಗಾಂಧಿ :
ಎಲೋನ್ ಮಸ್ಕ್ ಹೇಳಿಕೆ ಬೆನ್ನಲ್ಲೇ, ಭಾರತದಲ್ಲಿ ಇವಿಎಂಗಳು ಬ್ಲ್ಯಾಕ್ ಬಾಕ್ಸ್ ಎಂದ ರಾಹುಲ್ ಗಾಂಧಿ :
ಜಮ್ಮುವಿನಲ್ಲಿ ಶೂನ್ಯ ಭಯೋತ್ಪಾದನಾ ಯೋಜನೆ ಮೂಲಕ ಕಾಶ್ಮೀರದಲ್ಲಿ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಅಮಿತ್ ಷಾ ಸೂಚನೆ
ಜಮ್ಮುವಿನಲ್ಲಿ ಶೂನ್ಯ ಭಯೋತ್ಪಾದನಾ ಯೋಜನೆ ಮೂಲಕ ಕಾಶ್ಮೀರದಲ್ಲಿ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಅಮಿತ್ ಷಾ ಸೂಚನೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿಢೀರ್‌ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ : ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿಢೀರ್‌ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ : ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ
ಜಿ-7 ಶೃಂಗಸಭೆ : ಫೋಟೋ ಷೂಟ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರಸ್ಥಾನ
ಜಿ-7 ಶೃಂಗಸಭೆ : ಫೋಟೋ ಷೂಟ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರಸ್ಥಾನ
ಜಿ7 ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ : ಭಾಷಣದ ಮುಖ್ಯಾಂಶಗಳು
ಜಿ7 ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ : ಭಾಷಣದ ಮುಖ್ಯಾಂಶಗಳು
ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾನೂನಿನಡಿ ವಿಚಾರಣೆ
ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾನೂನಿನಡಿ ವಿಚಾರಣೆ
ಕುವೈತ್‌ ಅಗ್ನಿ ದುರಂತ : ಭಾರತಕ್ಕೆ ತರಲಾದ ಮೃತಪಟ್ಟ 45 ಭಾರತೀಯ ಕಾರ್ಮಿಕರ ಮೃತದೇಹ
ಕುವೈತ್‌ ಅಗ್ನಿ ದುರಂತ : ಭಾರತಕ್ಕೆ ತರಲಾದ ಮೃತಪಟ್ಟ 45 ಭಾರತೀಯ ಕಾರ್ಮಿಕರ ಮೃತದೇಹ

ನ್ಯೂಸ್ MORE NEWS...