ಮಾರಕಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ | JANATA NEWS

ಕೋಲಾರ : ಜಿಲ್ಲಾ ಪಂಚಾಯ್ತಿತಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಅವರನ್ನು ಲಾಂಗು ಮತ್ತು ಮಚ್ಚುಗಳಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸ್ (62) ಹಲ್ಲೆಯಿಂದ ಸಾವನ್ನಪ್ಪಿದವರು.
ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಅವರನ್ನು ಕೂಡಲೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ನಂತರ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರು ಮಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.