ಹುಲಿ ಉಗುರಿನ ಲಾಕೆಟ್ ಪ್ರಕರಣ: ವರ್ತೂರು ಸಂತೋಷ್ ಗೆ 14 ದಿನ ನ್ಯಾಯಾಂಗ ಬಂಧನ | JANATA NEWS
ಬೆಂಗಳೂರು : ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ಬಂಧನವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಮನೆಯಿಂದಲೇ ಸ್ಪರ್ಧಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ಜ್ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯ್ತು.
ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ನಿನ್ನೆ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.
ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕತ್ತಿನಲ್ಲಿ ದೊಡ್ಡ ಚೈನು ಹಾಕಿಕೊಂಡಿದ್ದು, ಅದರಲ್ಲಿ ಹುಲಿ ಉಗುರು ಇದೆ ಎಂದು ತಿಳಿದು ಬಂದಿದ್ದು. ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ನ್ಯಾಯಾಂಗ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ವರ್ತೂರು ಸಂತೋಷ್ ಪರ ವಕೀಲ ನಟರಾಜ್ ಜಾಮೀನು ಅರ್ಜಿ ಹಾಕಿದ್ದೀವಿ. ಬುಧವಾರ ವಿಚಾರಣೆ ಇದೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತನಿಖಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಬಂಧಿಸಿದ್ದಾರೆ. ಈಗ ಹುಲಿದು ಅಂತಾ ಹೇಳ್ತಿದ್ದಾರೆ. ಎಕ್ಸ್ಫರ್ಟ್ ಪರಿಶೀಲನೆ ನಡೆಸಿ ವರದಿ ಬಂದ ಬಳಿಕ ಗೊತ್ತಾಗಲಿದೆ ಎನ್ನಲಾಗಿದೆ.