Mon,Dec02,2024
ಕನ್ನಡ / English

ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ - ಎಚ್ ಡಿ ಕುಮಾರಸ್ವಾಮಿ | JANATA NEWS

25 Oct 2023
1269

ಬೆಂಗಳೂರು : ರಾಮನಗರ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಯೋಜನೆಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಕುಮಾರಸ್ವಾಮಿ ಅವರು, "ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿಕೆ ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ?

"ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು" ಎಂದು ದರ್ಪದ ಮಾತು ಹೇಳಿದ್ದಾರೆ ಡಿಸಿಎಂ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ!

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ 'ದುಷ್ಟ'ಪ್ರಜ್ಞೆ, 'ಅತಿ' ಬುದ್ಧಿವಂತಿಕೆ, 'ಅಸಾಮಾನ್ಯ' ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ.
*
"ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ" ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ!

ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು?
*
ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ @H_D_Devegowda ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ?
*
ನಾಡಪ್ರಭು ಶ್ರೀ ಕೆಂಪೇಗೌಡರು, ಶ್ರೀ ಕೆಂಗಲ್‌ ಹನುಮಂತಯ್ಯನವರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್‌ ಎಸ್ಟೇಟ್‌ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್?‌ ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

English summary :Ramanagara district cannot be broken - HD Kumaraswamy

ವಕ್ಫ್ ಬೋರ್ಡ್ ರದ್ದುಗೊಳಿಸಿದ  ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರ
ವಕ್ಫ್ ಬೋರ್ಡ್ ರದ್ದುಗೊಳಿಸಿದ ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರ
ಫೈರ್‌ಬ್ರಾಂಡ್ ಹಿಂದೂ ನಾಯಕ ಸಾಧು ಚಿನ್ಮೋಯ್ ಕೃಷ್ಣ ಬ್ರಹ್ಮಚಾರಿ ಅವರನ್ನು ಬಂಧಿಸಿದ ಬಾಂಗ್ಲಾದೇಶದ ಡಿಟೆಕ್ಟಿವ್ ಬ್ರಾಂಚ್
ಫೈರ್‌ಬ್ರಾಂಡ್ ಹಿಂದೂ ನಾಯಕ ಸಾಧು ಚಿನ್ಮೋಯ್ ಕೃಷ್ಣ ಬ್ರಹ್ಮಚಾರಿ ಅವರನ್ನು ಬಂಧಿಸಿದ ಬಾಂಗ್ಲಾದೇಶದ ಡಿಟೆಕ್ಟಿವ್ ಬ್ರಾಂಚ್
ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್
ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್
ಅವೈಜ್ಞಾನಿಕ ರೇಷನ್ ಕಾರ್ಡ್ ಪರಿಷ್ಕರಣೆ : ಒಂದೇ ಏಟಿಗೆ 2 ಗ್ಯಾರೆಂಟಿ ಯೋಜನೆ ಢಮಾರ್ - ಆರ್.ಅಶೋಕ್
ಅವೈಜ್ಞಾನಿಕ ರೇಷನ್ ಕಾರ್ಡ್ ಪರಿಷ್ಕರಣೆ : ಒಂದೇ ಏಟಿಗೆ 2 ಗ್ಯಾರೆಂಟಿ ಯೋಜನೆ ಢಮಾರ್ - ಆರ್.ಅಶೋಕ್
ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ  ಆದೇಶಿಸಿದ ಸಚಿವ ಮಧು ಬಂಗಾರಪ್ಪ
ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಆದೇಶಿಸಿದ ಸಚಿವ ಮಧು ಬಂಗಾರಪ್ಪ
ಸಿನಿಮೀಯ ರೀತಿಯಲ್ಲಿ ಪಾಕ್ ಏಜೆನ್ಸಿ ಕೈಯಿಂದ ಏಳು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಸಿನಿಮೀಯ ರೀತಿಯಲ್ಲಿ ಪಾಕ್ ಏಜೆನ್ಸಿ ಕೈಯಿಂದ ಏಳು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಅಮೆರಿಕ ಫೆಡರಲ್ ಅಧಿಕಾರಶಾಹಿ ಶುದ್ಧೀಕರಿಸಲು ಮಸ್ಕ್ ಜೊತೆ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
ಅಮೆರಿಕ ಫೆಡರಲ್ ಅಧಿಕಾರಶಾಹಿ ಶುದ್ಧೀಕರಿಸಲು ಮಸ್ಕ್ ಜೊತೆ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ, ಕೆಟಿಪಿಪಿ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ - ಆರ್. ಅಶೋಕ
ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ, ಕೆಟಿಪಿಪಿ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ - ಆರ್. ಅಶೋಕ
ಬೆಂಗಳೂರು ನಗರದ ಹಲವೆಡೆ ನಾಳೆ ಬುಧವಾರ ವಿದ್ಯುತ್ ವ್ಯತ್ಯಯ
ಬೆಂಗಳೂರು ನಗರದ ಹಲವೆಡೆ ನಾಳೆ ಬುಧವಾರ ವಿದ್ಯುತ್ ವ್ಯತ್ಯಯ
ಕಾಲಾ ಕುಮಾರಸ್ವಾಮಿ ಎಂದು ನಿಂದನೆ : ಸಚಿವ ಜಮೀರ್ ವಿರುದ್ಧ ಜನಾಂಗೀಯ ನಿಂದನೆ, ವರ್ಣಭೇದ ತಾರತಮ್ಯ ಆರೋಪ
ಕಾಲಾ ಕುಮಾರಸ್ವಾಮಿ ಎಂದು ನಿಂದನೆ : ಸಚಿವ ಜಮೀರ್ ವಿರುದ್ಧ ಜನಾಂಗೀಯ ನಿಂದನೆ, ವರ್ಣಭೇದ ತಾರತಮ್ಯ ಆರೋಪ
ಜಮಾತ್-ಎ-ಇಸ್ಲಾಮಿ ಇಸ್ಲಾಮಿಕ್ ಮೂಲಭೂತ ಸಂಘಟನೆಗಳ ಬೆಂಬಲವನ್ನು ವಯನಾಡಿನಲ್ಲಿ ಕಾಂಗ್ರೆಸ್‌ ಪಡೆಯುತ್ತಿದೆ - ಕೇರಳ ಸಿಎಂ
ಜಮಾತ್-ಎ-ಇಸ್ಲಾಮಿ ಇಸ್ಲಾಮಿಕ್ ಮೂಲಭೂತ ಸಂಘಟನೆಗಳ ಬೆಂಬಲವನ್ನು ವಯನಾಡಿನಲ್ಲಿ ಕಾಂಗ್ರೆಸ್‌ ಪಡೆಯುತ್ತಿದೆ - ಕೇರಳ ಸಿಎಂ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ ಚಿತ್ರವಿರುವ ರೇಷನ್ ಕಿಟ್ ಗಳು ವಯನಾಡ್ ನಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ ಚಿತ್ರವಿರುವ ರೇಷನ್ ಕಿಟ್ ಗಳು ವಯನಾಡ್ ನಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು

ನ್ಯೂಸ್ MORE NEWS...