ಚಿಕ್ಕಬಳ್ಳಾಪುರ : ಟಾಟಾ ಸುಮೋ ಲಾರಿ ಡಿಕ್ಕಿ 12 ಜನರ ಸಾವು | JANATA NEWS
ಬೆಂಗಳೂರು : ಚಿಕ್ಕಬಳ್ಳಾಪುರ ಬಳಿ ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಜನ ದಾರುಣ ಸಾವನ್ನಪ್ಪಿದ್ದಾರೆ.
ಇಂದು ಗುರುವಾರ, ನಸುಕಿನ ವೇಳೆ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ 12 ಜನ ಮೃತಪಟ್ಟಿದ್ದಾರೆ.
ಟಾಟಾ ಸುಮೊ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಸ್ಥಳದಲ್ಲಿ ಕವಿದ ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ಕಾಣಿಸದೆ ರಸ್ತೆಬಂದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೊ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 12 ಜನ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.