ರಾಮನಗರ ಬೆಂಗಳೂರು ಸೇರ್ಪಡೆ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ | JANATA NEWS

ಉಡುಪಿ : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರದ ಬಗ್ಗೆ ನನ್ನ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ ಆಫರ್ ನೀಡಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ ಎಂದರು. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ.
ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ ಯಾವಾಗಲೂ ಹಾಗೆ ಆಗಲ್ಲ ವಿಫಲ ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಅಧಿಕಾರಕ್ಕೊಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.
ರಾಮನಗರ ಬೆಂಗಳೂರು ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಳಿ ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಯಾರೂ ಚರ್ಚೆ ಮಾಡಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.