ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಅರೆಸ್ಟ್ | JANATA NEWS
ಯಾದಗಿರಿ : ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಆರೋಪಿಯನ್ನು ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂದು ಗುರುತಿಸಲಾಗಿದೆ. ಪಿಎಸ್ ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಇದೇ ಗ್ರಾಮದವನಾಗಿದ್ದಾನೆ ಎನ್ನಲಾಗಿದೆ. ಮತ್ತಿಬ್ಬರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಆರೋಪಿ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಈ ವೇಳೆ ವಿಚಾರಣೆ ನಡೆಸಿದಾಗ ಆತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ.
ಕಿವಿಯಲ್ಲಿ ಬ್ಲೂಟೂತ್ ಇಟ್ಟುಕೊಂಡು ಬರೆಯುತ್ತಿರುವುದನ್ನು ಪತ್ತೆ ಹಚ್ಚಿ ತದನಂತರ ಕಿವಿ ತಜ್ಞರ ಬಳಿ ಕರೆದೊಯ್ದು ಬ್ಲೂಟೂತ್ ಹೊರ ತೆಗೆದು ವಶಕ್ಕೆ ಪಡೆದು ಅಭ್ಯರ್ಥಿ ತ್ರಿಮೂರ್ತಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.