ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಒಂದೇ ಕುಟುಂಬದ ಮೂವರ ಸಾವು | JANATA NEWS

ತುಮಕೂರು : ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಕೆರೆ ಕಾರು ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಟುಂಬ ಸಮೇತರಾಗಿ ಮುಂಜಾನೆ ಧರ್ಮಸ್ಥಳಕ್ಕೆಂದು ತೆರಳುತ್ತಿದ್ದ ವೇಳೆ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದ ಬಳಿಯಿರುವ ರಾಮಲಿಂಗಪುರ ಕೆರೆಯಲ್ಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರನ್ನ ದೊಡ್ಡಣ್ಣ, ಸಣ್ಣಮ್ಮ, ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ್ ಎಂಬುವವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಕಾರಿನ ಬಾಗಿಲು ತೆಗೆದು ಹೊರ ಬಂದು ಈಜಿ ಪಾರಾಗಿ ಬೊಬ್ಬಿಟ್ಟು ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಬಂದು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.