ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ | JANATA NEWS

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಚಿರತೆ ಒಂದು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ರಾತ್ರಿ ವೇಳೆ ರಸ್ತೆಯಲ್ಲಿ ಚಿರತೆಯೊಂದು ಓಡಾಡುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸರಿಯಾಗಿದ್ದು ಕಾರು ಒಂದರ ಮುಂದೆ ಈ ಚಿರತೆ ರಸ್ತೆ ದಾಟುವುದು ಕೂಡ ಸಿಸಿಟಿವಿಯಲ್ಲಿ ಕಂಡು ಬಂದಿದೆ.
ಬೆಂಗಳೂರಿನ ಎಇಸಿಎಸ್ ಲೇಔಟ್ - ಎ ಬ್ಲಾಕ್, ಕೂಡ್ಲು ಗೇಟ್ ಬಳಿಯ ರಸ್ತೆಗಳಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ಕಂಡುಬಂದಿದೆ.
ಯಾರ ಮೇಲೂ ದಾಳಿ ಮಾಡುವ ಮುನ್ನ ಅಧಿಕಾರಿಗಳು ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸಮುದಾಯ ಒತ್ತಾಯಿಸಿದೆ.
English summary :Another leopard sighting in Bengaluru: Increased anxiety among locals