ಬೆಂಗಳೂರಿನಲ್ಲಿ ಸರ್ಕಾರಿ ನಿಷ್ಠಾವಂತ ಅಧಿಕಾರಿ ಪ್ರತಿಮಾ ಭೀಕರ ಹತ್ಯೆ | JANATA NEWS
ಬೆಂಗಳೂರು : ಕರ್ನಾಟಕ ಸರ್ಕಾರಿ ನಿಷ್ಠಾವಂತ ಅಧಿಕಾರಿ ಪ್ರತಿಮಾ(45) ಅವರನ್ನು ಬೆಂಗಳೂರಿನ ಮನೆಯಲ್ಲಿಯೇ ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆಗೆದ್ದಿದ್ದಾರೆ.
ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಮಹಿಳಾ ಅಧಿಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಹುದ್ದೆಯಲ್ಲಿದ್ದರು. ಪತಿ ಇಲ್ಲದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ಪ್ರತಿಮಾ ಅವರನ್ನು ರಾತ್ರಿ 8 ಗಂಟೆಗೆ ಕಛೇರಿಯಿಂದ ಮನೆಗೆ ಚಾಲಕ ಡ್ರಾಪ್ ಮಾಡಿ ತೆರಳಿದ ಬಳಿಕ ಹಂತಕರು ಬಂದು ಕೊಲೆ ಮಾಡಿ ಹೋಗಿದ್ದಾರೆ. ಮನೆಯ ಒಳಗೆ ಬಂದು ಕೊಲೆ ಮಾಡಿ ಹೋಗಿರುವ ಕಾರಣ ಮೇಲ್ನೋಟಕ್ಕೆ ಇದು ಪಕ್ಕಾ ಪ್ಲಾನ್ ಮಾಡಿ, ಈ ಕೃತ್ಯ ಸಗಲು ಅಕ್ರಮ ಗಣಿಗಾರಿಕೆ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (45) ರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಈ ಭೀಕರ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.