ಸಿಎಂ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅಧಿಕಾರಿಗಳಿಗೂ ಭದ್ರತೆ ಇಲ್ಲ? | JANATA NEWS
ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಅವರ ಕೊಲೆ ಕುರಿತಂತೆ ಪೋಸ್ಟ್ ಮಾಡಿರುವ ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಡಾ.ಅಶ್ವಥ್ ನಾರಾಯಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲಿ ಅಧಿಕಾರಿಗಳಿಗೂ ಭದ್ರತೆ ಇಲ್ಲದಂತಾಗಿದೆ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಡಿಸಿಎಂ ಅವರು, "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಬಂದಿದೆ, ಪ್ರಾಮಾಣಿಕ ಅಧಿಕಾರಿಗಳ ಅನುಮಾನಾಸ್ಪದ ಸಾವು, ಕೊಲೆಗಳು ಮರುಕಳಿಸಿದೆ.
2015ರಲ್ಲಿ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಅನುಮಾನಾಸ್ಪದ ಸಾವು, 2016ರಲ್ಲಿ ಡಿವೈಎಸ್ಪಿ ಗಣಪತಿ ಅವರ ಅನುಮಾನಾಸ್ಪದ ಸಾವು ಇಂದಿಗೂ ನಮ್ಮ ಕಣ್ಣಮುಂದೆಯೇ ಇದೆ. ಅಷ್ಟರಲ್ಲೇ ನಿನ್ನೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಅವರ ಕೊಲೆಯಾಗಿದೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅಧಿಕಾರಿಗಳಿಗೂ ಭದ್ರತೆ ಇಲ್ಲದಂತಾಗಿದೆಯೇ?", ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.