Thu,Nov30,2023
ಕನ್ನಡ / English

ಕುತೂಹಲ ಕೆರಳಿದ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ | JANATA NEWS

09 Nov 2023
505

ಬೆಂಗಳೂರು : ರಾಜ್ಯದ ಸಿಎಂ ಕುರ್ಚಿಯ ಕುರಿತು ಚರ್ಚೆ ಹೆಚ್ಚಿರುವ ಮಧ್ಯೆ ಬೆಂಗಳೂರ ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ಮಾಡಿ ನಿನ್ನೆ ರಾತ್ರಿ ಚರ್ಚೆ ನಡೆಸಿದ್ದಾರೆ ತಮ್ಮ ಭೇಟಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿರುವ ಸಂಸದ ಸೂರ್ಯ ಅವರು ಎದ್ದಿರುವ ಎಲ್ಲಾ ಊಹಾಪೂಹಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಹೇಳಿರುವ ಸಂಸದ ಸೂರ್ಯ,

"ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿ ಶ್ರೀ @DKShivakunar ರನ್ನು ಇಂದು ಭೇಟಿಯಾಗಿ ಚರ್ಚಿಸಿದೆ.

1) ಕಳೆದ 5-6 ತಿಂಗಳುಗಳಿಂದ ಕೆ - ರೈಡ್ & ಬಿ.ಎಂ.ಆರ್.ಸಿ.ಎಲ್ ನ ಎಂ.ಡಿ ಹುದ್ದೆಗಳು ಖಾಲಿಯಿದ್ದು, ಈ ಕುರಿತು ನಾನು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣದ ಬಹುಮುಖ್ಯ ಕಾಮಗಾರಿಗಳಿಗೆ ಪೂರ್ಣಾವಧಿ ಎಂ.ಡಿ ನೇಮಕದ ಅಗತ್ಯತೆ ಬಗೆಗೆ ಶ್ರೀ ಡಿ ಕೆ ಶಿವಕುಮಾರ್ ಬಳಿ ವಿವರಿಸಿದ್ದು, ಶೀಘ್ರಗತಿಯಲ್ಲಿ ಎರಡೂ ಪ್ರಾಧಿಕಾರಗಳಿಗೆ ಪೂರ್ಣಾವಧಿ ಎಂ ಡಿ ನೇಮಕಕ್ಕೆ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.

2) ಬನಶಂಕರಿ ಮೆಟ್ರೋ ಸ್ಟೇಷನ್ & ಬನಶಂಕರಿ ಬಿ.ಎಂ.ಟಿ.ಸಿ ಬಸ್ ನಿಲ್ದಾಣಗಳ ಮಧ್ಯೆ ಸ್ಕೈವಾಕ್ ನಿರ್ಮಾಣಕ್ಕೆ 2019 ರಿಂದಲೂ ನಾನು ಒತ್ತಾಯಿಸುತ್ತ ಬಂದಿದ್ದು, ಸ್ಕೈ ವಾಕ್ ನಿರ್ಮಾಣದಿಂದ ಬಹು ಆಯಾಮದ ಸಂಚಾರಕ್ಕೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆಯು ನೀಲನಕ್ಷೆ 2019 ರಲ್ಲಿಯೇ ತಯಾರಾಗಿದ್ದು, ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವಂತೆಯೂ ಕೂಡ ಒತ್ತಾಯಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿರುತ್ತಾರೆ.

3) #NammaMetro ಮಾರ್ಗದ 3ನೆ ಹಂತದ ಕಾಮಗಾರಿಗೆ ಹಿಂದಿನ ರಾಜ್ಯ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿಸಿದ್ದು, ಪರಿಷ್ಕೃತ ಡಿ. ಪಿ.ಆರ್ ಅನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಇನ್ನೂ ಸಲ್ಲಿಕೆಯಾಗಿರುವುದಿಲ್ಲ. ಡಿ.ಪಿ.ಆರ್ ಸಲ್ಲಿಕೆ ವಿಳಂಬದಿಂದ ನಗರದ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸಬಲ್ಲ ಕಾಮಗಾರಿಗಳು ವಿಳಂಬಗೊಳ್ಳುವ ಸಾಧ್ಯತೆಯ ಕುರಿತು ವಿವರಿಸಿದೆ.

4) ಮೆಟ್ರೋ 3ನೆ ಹಂತದ ಕಾಮಗಾರಿಯೊಂದಿಗೆ, ಇದೇ ಮಾರ್ಗದಲ್ಲಿ ಬಹು ಆಯಾಮದ ಫ್ಲೈ ಓವರ್ ನಿರ್ಮಾಣದಿಂದ ವೆಗಾ ಸಿಟಿ ಮಾಲ್ & ನಾಯಂಡಹಳ್ಳಿ ವರೆಗೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದರ ಕುರಿತು ಕೂಡ ಇದೇ ಸಮಯದಲ್ಲಿ ವಿವರಿಸಿದ್ದೇನೆ.

5) ನನ್ನ ಲೋಕಸಭಾ ಕ್ಷೇತ್ರದ ಹೊಸಕೆರೆ ಹಳ್ಳಿಯಲ್ಲಿ, ಅಂಡರ್ ಗ್ರೌಂಡ್ ಕೇಬಲ್ ಮೂಲಕ 66 ಕೆವಿ EHT ಲೈನ್ ಎಳೆಯುವದರಿಂದ ಚಿಕ್ಕಮಕ್ಕಳು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬಹುದು ಎಂಬುದರ ಬಗ್ಗೆ ವಿವರಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುತ್ತಾರೆ.

6) ಬೆಂಗಳೂರು ಮಹಾನಗರದಲ್ಲಿ, ನಿಯೋಜಿತ ಟನಲ್ ರಸ್ತೆ ನಿರ್ಮಾಣದ ಬದಲಾಗಿ, ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದ್ದು, ಟನಲ್ ಬದಲು ರೈಲು ಮಾರ್ಗ ನಿರ್ಮಾಣವಾದಲ್ಲಿ ಸಂಚಾರ ದಟ್ಟಣೆ ನಿಯಂತ್ರಣವಾಗಲಿದೆ ಎಂಬುದನ್ನು ಇದೇ ಸಂದರ್ಭದಲ್ಲಿ ವಿವರಿಸಿದ್ದು, ಈ ಸಲಹೆಗಳ ಕುರಿತು ಪರಿಶೀಲಿಸುವುದಾಗಿ ತಿಳಿಸಿರುತ್ತಾರೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಾರ್ವಜನಿಕ ಸಾರಿಗೆ ಸಂಚಾರ ಉತ್ತೇಜನ ಅತೀ ದೊಡ್ಡ ಪರಿಹಾರವಾಗಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಿದ್ದೇನೆ.

ನನ್ನ ಎಲ್ಲ ಮನವಿಗಳಿಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೆಂಗಳೂರಿನ ಅಭಿವೃದ್ಧಿ ಕುರಿತಾದ ಈ ಎಲ್ಲ ಕಾಮಗಾರಿಗಳ ಕುರಿತಾದ ಪರಿಷ್ಕೃತ ಮಾಹಿತಿಗಳನ್ನು ಪರಿಶೀಲಿಸುವುದರೊಂದಿಗೆ, ನಾನು ನಿಮಗೆ ನಿರಂತರವಾಗಿ ಈ ಕುರಿತಾದ ಅಪ್ಡೇಟ್ ಗಳನ್ನು ತಮಗೆ ನೀಡುತ್ತಿರುತ್ತೇನೆ.", ಎಂದು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary :Intrigued MP Tejaswi Surya met DCM DK Shivakumar

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...