Thu,Nov30,2023
ಕನ್ನಡ / English

ಎಚ್ .ಡಿ.ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ರಾಜ್ಯ ಕಾಂಗ್ರೆಸ್ ನಿಂದ ಗಂಭೀರ ಆರೋಪ | JANATA NEWS

14 Nov 2023
503

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಕಮೀರ ಆರೋಪ ಮಾಡಿದೆ

ಈ ಕುರಿತು ಹೇಳಿರುವ ಕಾಂಗ್ರೆಸ್ ಪಕ್ಷ, "ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.

ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!
ಎಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ,

ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ?

ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ,
ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?!

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ,
ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ?

ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ?

ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?", ಎಂದು ಪ್ರಶ್ನಿಸಿ ಎಕ್ಸ್ ನಲ್ಲಿ ಅಧಿಕೃತ ಖಾತೆಯಿಂದ ಪೋಸ್ಟ್ ಮಾಡಿದೆ

English summary :HD Kumaraswamy has stolen electricity, a serious allegation from the state Congress

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...