Thu,Nov30,2023
ಕನ್ನಡ / English

ಖಾಸಗಿ ಡೆಕೋರೇಟರ್ ಇಂದ ಅಚಾತುರ್ಯ ಅಚಾತುರ್ಯಕ್ಕೆ ದಂಡ ಕಟ್ಟುತ್ತೇನೆ ಎಚ್ ಡಿ ಕುಮಾರಸ್ವಾಮಿ | JANATA NEWS

14 Nov 2023
514

ಬೆಂಗಳೂರು : ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದ ನೇರವಾಗಿ ಸಂಪರ್ಕ ಪಡೆದ ಕುರಿತು ಕರ್ನಾಟಕ ಕಾಂಗ್ರೆಸ್ ಪಕ್ಷದ ಟೀಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು ನಾನು ಮನೆಯಲ್ಲಿ ಇಲ್ಲದೆ ಇರುವಾಗ ನಡೆದಿರುವ ಅಚಾತುರ್ಯಕ್ಕೆ ನಾನು ದಂಡ ಕಟ್ಟಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ

ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿರುವ ಎಚ್‍ಡಿ ಕುಮಾರಸ್ವಾಮಿ ಅವರು, "ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.
*
ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.
*
ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ.", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary :Ready to pay fine for private decorator mistakes - Hd kumaraswamy

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...