Mon,Apr13,2026
ಕನ್ನಡ / English

ಯತೀಂದ್ರ ಸಿದ್ದರಾಮಯ್ಯ ವಿಡಿಯೋ: ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ ಹೆಚ್‍ಡಿಕೆ | JANATA NEWS

16 Nov 2023

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಫೋನಿನಲ್ಲಿ ಮಾತಾಡುತ್ತಿರುವ ವೈರಲ್ ವಿಡಿಯೋ ಒಂದನ್ನು ಎಕ್ಸ್ ನಲ್ಲಿ ಶೇರ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಾಸಿಗಾಗಿ ಹುದ್ದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಪೋಸ್ಟಲ್ಲಿ ಬರೆದಿರುವ ಎಚ್ಟಿಕೆ ಅವರು, "ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ರಾಜ್ಯ ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ.
*
ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?
*
ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, "ನಾನು ಹೇಳಿದವರಷ್ಟನ್ನೇ ಮಾಡಿ" ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ 'ಒಳ ವಸೂಲಿ ಸಚಿವಾಲಯ'ದ ಸಚಿವರಾ?
*
ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ?
*
ಈಗ ಹೇಳಿ ಸಿದ್ದರಾಮಯ್ಯನವರೇ , ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?
*
ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ 'ಸುಲಿಗೆಪುತ್ರ' ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು.
*
ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ?ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊ ವಿರುದ್ಧ ಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ.
ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ.

English summary :Yathindra Siddaramaiah Video: HDK lashed out CM Siddaramaiah heavily

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...