ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ | JANATA NEWS

ಬೆಂಗಳೂರು : ಜಮ್ಮು ಕಾಶ್ಮೀರ ದ ರಜೌರಿಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ವೀರಮರಣ ಹೊಂದಿದ ಕನ್ನಡದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥೀವ ಶರೀರ ನಿನ್ನೆ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲರಾದ , ಸಿಎಂ ಸಿದ್ದರಾಮಯ್ಯ, ಸಚಿವ ಕೆಜೆ ಜಾರ್ಜ್, ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಹೇಳಿಕೆ ನೀಡಿದ್ದು, "ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ."
"ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಪ್ರಾಂಜಲ್‌ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಹೆಗಲಾಗುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇನೆ." ಎಂದು ಹೇಳಿದ್ದಾರೆ.