ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ | JANATA NEWS
ಬೆಂಗಳೂರು : ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಹಾಗೂ ಇತರ ಯೋಧರ ಅಗಲಿಕೆಯ ಹಿನ್ನಲೆಯಲ್ಲಿ ಶೋಕಾಚರಣೆಯ ಕಾರಣ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಂದು ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಮುಂದೂಡಲಾಗಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು, "ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ನಾಳೆ (ನವೆಂಬರ್ 25 ರ ಶನಿವಾರ ಬೆಳಿಗ್ಗೆ 10 ಗಂಟೆಗೆ) ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಮುಂದೂಡಲಾಗಿದೆ."
"ಹುತಾತ್ಮ ಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಹಾಗೂ ಇತರ ಯೋಧರ ಅಗಲಿಕೆಯ ಹಿನ್ನಲೆಯಲ್ಲಿ ಶೋಕಾಚರಣೆಯ ಕಾರಣದಿಂದ ಪ್ರತಿಭಟನೆ ಮುಂದೂಡಲಾಗಿದ್ದು ದಿನಾಂಕ ಹಾಗೂ ಹೋರಾಟದ ಸ್ವರೂಪವನ್ನು ಶೀಘ್ರದಲ್ಲೇ ತಿಳಿಸಲಾಗುವುದು.", ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಅವರು ನಿನ್ನೆ ಸಂಜೆ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಆಗಮಿಸಿದ ಹುತಾತ್ಮ ಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.