ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ! | JANATA NEWS
ಮಂಗಳೂರು : ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸೋತಿದ್ದರಿಂದ ಖಿನ್ನತೆಗೆ ಜಾರಿದ್ದ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ನಿಶಾ (17) ಮೃತ ವಿದ್ಯಾರ್ಥಿನಿ. ಈಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನಿಶಾ ಖಿನ್ನತೆಗೊಳಗಾಗಿದ್ದಳು.
ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಈಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ನಿಶಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.