ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ | JANATA NEWS
ಬೆಂಗಳೂರು : ಕಾಂಗ್ರೆಸ್ ಪಕ್ಷದ ಸರ್ಕಾರ ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಎಂದು ರಾಜ್ಯ ವಿರೋಧ ಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದೆ. ಇಂದು ರಾಜಧಾನಿ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು ರಾಜ್ಯಾದ್ಯಂತ ತಲ್ಲಣ ಸೃಷ್ಟಿಮಾಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಕಾರಣ ಎನ್ನುತ್ತಿದೆ ವಿರೋಧ ಪಕ್ಷ ಬಿಜೆಪಿ.
"ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಪಕ್ಷದ ಸರ್ಕಾರ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್, ಗೃಹ ಸಚಿವ ಡಾ. ಪರಮೇಶ್ವರ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ.", ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಅಶ್ವತನಾರಾಯಣ ಅವರು, ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣ ಹಾಗೂ ನಿರ್ಲಕ್ಷ್ಯ ಧೋರಣೆಯ ಪರಿಣಾಮ ಶಾಲೆಗಳಿಗೂ ಬಾಂಬ್ ಬೆದರಿಕೆ ಕರೆ ಬರುವ ಪರಿಸ್ಥಿತಿ ನಿರ್ಮಾಣ ಆಗಿದೆ.", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.