ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದ ಪೀರ್ ವಿರುದ್ಧ ಇನ್ನಷ್ಟು ಮಾಹಿತಿ ಹಂಚಿಕೊಂಡ ಯತ್ನಾಳ | JANATA NEWS
ಬೆಳಗಾವಿ : ಬಿಜೆಪಿ ಮುಖಂಡ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮುಸ್ಲಿಂ ಧರ್ಮಗುರು ತನ್ವೀರ್ ಪೀರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು ಐಎಸ್ಐಎಸ್ ಬೆಂಬಲಿಗರು ಹಾಗೂ ಭಯೋತ್ಪಾದಕ ಸಂಬಂಧ ಇರುವ ಕುರಿತಾಗಿ ಮಾಹಿತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡ ತನ್ವೀರ್ ಪೀರಾ ಕೊಲೆ ಕೇಸ್ ಒಂದರಲ್ಲಿ ಆರೋಪಿತನಾಗಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿಯು ಸಾಕ್ಷಿ ನಾಶ ಮಾಡುವುದಲ್ಲದೆ, ನಮ್ಮ ಕುಟುಂಬಕ್ಕೆ, ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿರುವ ಪತ್ರ. ಎಂದು ಪತ್ರದ ಪ್ರತಿಯನ್ನು ಯತ್ನಾಳ್ ಹಂಚಿಕೊಂಡಿದ್ದಾರೆ.
"ವೇದಿಕೆ ಮೇಲೆ ಕೊಲೆ ಆರೋಪಿತನಿಗೆ ಏನು ಕೆಲಸ ? ಇವನನ್ನು ವೇದಿಕೆ ಮೇಲೆ ಏಕೆ ಬಿಟ್ಟರು ? ಒಂದು ಬಡ ಕುಟುಂಬಕ್ಕೆ ಬೆದರಿಕೆ ಒಡ್ಡುವ ವ್ಯಕ್ತಿ/ವ್ಯಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಶ್ಯಕತೆ ಏನಿತ್ತು..ಈತನ ಬಗ್ಗೆ ಇನ್ನಷ್ಟು ಮಾಹಿತಿ ಅತಿ ಶೀಘ್ರಧಲ್ಲಿ ಹಂಚಿಕೊಳ್ಳಲಿದ್ದೇನೆ..ಈತ ದೇಶದಿಂದ ಪೇರಿಕಿತ್ತಲು ಸಾಧ್ಯತೆಗಳಿದ್ದು ಪೊಲೀಸರು ಹಾಗೂ ಗುಪ್ತಚರ ಇಲಾಖೆ ಪೀರನ ಮೇಲೆ ನಿಗಾ ವಹಿಸಬೇಕು.," ಎಂದು ಯತ್ನಾಳ್ ಒತ್ತಾಯಿಸಿದ್ದಾರೆ