ಕಾಂಗ್ರೆಸ್ಸಿಗರಿಗೆ ಅಷ್ಟು ಅಭಿಮಾನ ಇದ್ದರೆ ಅವರ ಕಚೇರಿಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ - ಸಿಟಿ.ರವಿ | JANATA NEWS
ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ (ಮಂಡಕಳ್ಳಿ ವಿಮಾನ ನಿಲ್ದಾಣ ಎಂದೂ ಕರೆಯುತ್ತಾರೆ) ಟಿಪ್ಪು ಸುಲ್ತಾನ್ ಹೆಸರನ್ನು ಮರುನಾಮಕರಣ ಮಾಡುವ ಪ್ರಸ್ತಾವನೆ ಕರ್ನಾಟಕದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಶಾಸಕರ ಪ್ರಸ್ತಾವನೆಗೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ.
ಟಿಪ್ಪು ಸುಲ್ತಾನ್ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುವ ಬಗ್ಗೆ ಕಾಂಗ್ರೆಸ್ ಶಾಸಕ ಅಬ್ಬಯ್ಯ ಅವರ ಪ್ರಸ್ತಾವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸಿಟಿ ರವಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಯನ್ನು ಪಟ್ಟಿ ಮಾಡಿ ಅವರ ಹೆಸರನ್ನಿಡುವ ಪ್ರಸ್ತಾಪ ಮಾಡಿದ್ದಾರೆ. ಟಿಪ್ಪು ಹಿಂದೂಗಳ ಮಾರಣಹೋಮ ಮಾಡಿದ್ದ ಎಂದು ಕಿಡಿಕಾರಿದ್ದಾರೆ. ಅಬ್ಬಯ್ಯ ಅವರೇ ನಿಮ್ಮ ಮನೆಗೆ ಟಿಪ್ಪು ಹೆಸರು ಇಟ್ಟುಕೊಳ್ಳಿ. ಟಿಪ್ಪು ಆಡಳಿತ ಭಾಷೆ ಕನ್ನಡದ ಬದಲು ಪರ್ಷಿಯನ್ ಭಾಷೆಯನ್ನು ಹೆರಿದವನ ಹೆಸರನ್ನು ಯಾವದೇ ಕಾರಣಕ್ಕೂ ವಿಮಾನ ನಿಲ್ದಾಣದಕ್ಕೆ ಇಡೋದಿಲ್ಲ. ಕಾಂಗ್ರೆಸ್ಸಿಗರಿಗೆ ಅಷ್ಟು ಅಭಿಮಾನ ಇದ್ದರೆ ನಿಮ್ಮ ಕಚೇರಿಗೆ ಆ ಹೆಸರು ಇಟ್ಟಿಕೊಳ್ಳಿ ಎಂದು ಹೇಳಿದ್ದಾರೆ.
ನಾಲ್ಕು ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರನ್ನು ಮರುನಾಮಕರಣ ಮಾಡುವಂತೆ ಕೇಂದ್ರಕ್ಕೆ ಸೂಚಿಸುವ ನಿರ್ಣಯವನ್ನು ರಾಜ್ಯ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ಹಾಗೂ ವಿಜಿಯಾಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗದ್ಜ್ಯೋತಿ ಬಸವೇಶ್ವರ ಹೆಸರಿಡಬೇಕು ಎಂದು ನಿರ್ಣಯದಲ್ಲಿ ಹೇಳಲಾಗಿದೆ.