ಕೊರೊನಾ ರೂಪಾಂತರಿ : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ | JANATA NEWS
ಬೆಂಗಳೂರು : ಕೇರಳದಲ್ಲಿ ಕೋರೋನಾ ಪ್ರಕರಣ ಹೆಚ್ಚಾಗುತ್ತಿದ್ದು ರಾಜ್ಯ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯ ಗೊಳಿಸಲಾಗುತ್ತಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ, ಎಂದಿದ್ದಾರೆ. ಆದರೆ, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ, ಎಂದು ತಿಳಿಸಿದ್ದಾರೆ. ಅವರು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ.
ಸಲಹಾ ಸಮಿತಿ ಸಭೆ ನಡೆಸಿದ್ದೇವೆ.. . ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ಚರ್ಚೆ ನಡೆಸಲಾಗಿದೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ನಡೆಸಿರುವುದಾಗಿಯೂ, ಕೆಲವು ಸಲಹೆ ಮಾರ್ಗಸೂಚಿ ಪಡೆದಿರುವುದಾಗಿಯೂ ತಿಳಿಸಿದ್ದಾರೆ.