Mon,Apr13,2026
ಕನ್ನಡ / English

ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ ವಿಮಾನದಲ್ಲಿ ನಡೆಸಿದ ಫೋಟೋ ಶೂಟ್ ಗೆ ಭಾರಿ ಟೀಕೆ | JANATA NEWS

22 Dec 2023

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಐಷಾರಾಮಿ ವಿಮಾನದಲ್ಲಿ ನಡೆಸಿದ ಫೋಟೋ ಶೂಟ್ ಸಾಕಷ್ಟು ವೈರಲ್ ಆಗುವ ಜೊತೆಗೆ ಟೀಕೆಗೆ ಗುರಿಯಾಗಿದೆ.

ಬರ ಪರಿಹಾರದ ಬೇಡಿಕೆ ಇಟ್ಟು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಯಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಾಪಸ್ ಆಗುವ ಸಂದರ್ಭದಲ್ಲಿ ವಿಶೇಷ ಐಷಾರಾಮಿ ವಿಮಾನ ಮೂಲಕ ಬಂದಿದ್ದು, ಈ ಸಂದರ್ಭದಲ್ಲಿ ಫೋಟೋಶೂಟ್ ಮಾಡಿ ಕೆಜಿಎಫ್ ನ ಬ್ಯಾಗ್ರೌಂಡ್ ಮ್ಯೂಸಿಕ್ ಟ್ರ್ಯಾಕ್ ವಿಡಿಯೋ ವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದರು

ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.

"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ". ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ. ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ.", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary : Heavy criticism for the photo shoot conducted by Minister Jameer Ahmed Khan in a luxury plane

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...