ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಫೀಜ್ ಸಯೀದ್ ನನ್ನು ತಮಗೆ ಹಸ್ತಾಂತರಿಸುವಂತೆ ಕೋರಿದ ಭಾರತ | JANATA NEWS
ನವದೆಹಲಿ : 26/11 ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತವು ಪಾಕಿಸ್ತಾನವನ್ನು ಕೇಳಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ವರದಿಯ ಪ್ರಕಾರ, 26/11 ಮುಂಬೈ ದಾಳಿಯ ಉಗ್ರ ಹಫೀಜ್ ಸಯೀದ್ ಈಗ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾನೆ, ಎಂದು ಹೇಳಲಾಗಿದೆ.
71ರ ಹರೆಯದ ಹಫೀಜ್ ಸಯೀದ್‌ಗೆ 2022ರ ಏಪ್ರಿಲ್‌ನಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಎರಡು ಪ್ರಕರಣಗಳಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ಬಳಿಕ ಪಾಕಿಸ್ತಾನದ ನ್ಯಾಯಾಲಯ 33 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ವಿಶ್ವಸಂಸ್ಥೆಯಿಂದ ಗೊತ್ತುಪಡಿಸಿದ ಭಯೋತ್ಪಾದಕ ಹಫೀಜ್ ಸಯೀದ್ 2 ಭಯೋತ್ಪಾದನಾ ಪ್ರಕರಣಗಳಲ್ಲಿ ಪಾಕ್ ನ್ಯಾಯಾಲಯದಿಂದ 33 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ, ಆದರೆ ಈಗ ಅವನು ಬಹಿರಂಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಪಾಕಿಸ್ತಾನ ಮತ್ತೊಮ್ಮೆ ಬಹಿರಂಗವಾಗಿದೆ. ಅವರ ಭಯೋತ್ಪಾದಕ ಪುತ್ರ ತಲ್ಹಾ ಸಯೀದ್ ಕೂಡ ಲಾಹೋರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾನೆ.