ಊಹಾಪೋಹಗಳಿಗೆ ಉತ್ತರಿಸುವುದಿಲ್ಲ : ಬಿ.ಕೆ.ಹರಿಪ್ರಸಾದ್ ಹೇಳಿಕೆ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ | JANATA NEWS
ಬೆಂಗಳೂರು : ಗೋದ್ರಾ ದಂತಹ ದುರಂತ ರಾಜ್ಯದಲ್ಲಿ ಮತ್ತೊಮ್ಮೆ ಮರುಕಳಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ನೇರವಾಗಿ ತಳ್ಳಿ ಹಾಕಿದ್ದಾರೆ.
ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು, ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು, ಎಂದು ಹೇಳಿದ್ದಾರೆ.