Wed,Jun18,2025
ಕನ್ನಡ / English

ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ ಎಲ್ಲವೂ ಸಿದ್ದರಾಮಣ್ಣ ಅವರದ್ದು - ಎಚ್.ಡಿ.ಕೆ | JANATA NEWS

06 Jan 2024

ಬೆಂಗಳೂರು : ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ, ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು., ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪ್ರಕರಣದ ಎಫ್.ಐ.ಆರ್.ಪ್ರತಿಯೊಂದನ್ನು ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, "ಕರ್ನಾಟಕದ 'ನೀರೋ'ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ DR. G Parameshwara ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ 'ಪರಿಪೂರ್ಣ ಸಹಕಾರ' ಕೊಡುವ ಹಾಸನ ಜಿಲ್ಲಾ ಉಸ್ತುವಾರಿ K N Rajanna ಅವರು ಸಂಸದ Pratap Simha ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ."
"ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. 'ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ' ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು."
"ಶುಕ್ರವಾರ Janata Dal Secular ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ.. ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಹೇಳಿ? ಆಗ ಕ್ರಮ ಜರುಗಿಸುವ ದಮ್ಮು ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ?", ಎಂದು ಪ್ರಶ್ನಿಸಿದ್ದಾರೆ.

ವಿಷಯಕ್ಕೆ ಸಂಬಂಧಪಟ್ಟಂತೆ ಬಹಿರಂಗ ಚರ್ಚೆಗೆ ಸವಾಲೆಸೇದ ಕುಮಾರಸ್ವಾಮಿ ಅವರು, "ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡುತ್ತೀರಾ? ನಾನು ಫಿಕ್ಸ್ ಮಾಡಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ.
ಸರಿ, ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ."
"ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ?"
"ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ ₹50 ಲಕ್ಷ ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ?"
"ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ!!", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary :Story, screenplay, dialogues, background music for the entire Vikramsimha score are all by Siddaramanna - HDK

ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...