ಬಿಜೆಪಿ ಹೈಕಮಾಂಡ್ ಜೊತೆ ಮಾತುಕತೆ ಫಲಪ್ರದ, ಎಲ್ಲಾ ಸಮಸ್ಯೆಗಳು ಸುಖಾಂತ್ಯವಾಗಿದೆ | JANATA NEWS
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗಿನ ಮಾತುಕತೆ ಫಲಪ್ರದವಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯ ನಂತರದ ಘಟನೆಗಳಿಂದಾದ ಎಲ್ಲಾ ಸಮಸ್ಯೆಗಳೂ ಈಗ ಸುಖಾಂತ್ಯ ಕಂಡಿವೆ ಎಂದು ಸೋಮಣ್ಣ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸೋಮಣ್ಣ, ಒಳ್ಳೇತನಕ್ಕೆ, ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ.
ಯಾವುದಾದರೂ ಮೂರು ಲೋಕಸಭೆ ಕ್ಷೇತ್ರಗಳ ಜವಾಬ್ದಾರಿ ಕೊಡಿ, ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಭರವಸೆ ನೀಡಿದ್ದೇನೆ. ಇದರ ಜೊತೆಗೆ ರಾಜ್ಯಸಭೆ ಸ್ಥಾನ ಕೊಡಿ ಅಂತ ಕೇಳಿದ್ದೇನೆ. ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಅಧ್ಯಕ್ಷ ಸ್ಥಾನ ಅರುಣ್ ಸೋಮಣ್ಣ ಕೈತಪ್ಪಿದೆ ಎನ್ನುವ ಮಾತು ಸರಿಯಲ್ಲ. ನಾನು ಯಾರ ಬಳಿಯೂ ಮಗನಿಗೆ ಸ್ಥಾನಮಾನ ಕೇಳಲಿಲ್ಲ ಎಂದು ತಿಳಿಸಿದರು.
ಕೆಲಸ ಮಾಡಿ ಬಳಿಕ ಮುಂದಿನದ್ದನ್ನ ಚರ್ಚೆ ಮಾಡುತ್ತೇವೆ. ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದಿದ್ದಾರೆ.