ಹಾನಗಲ್ ಗ್ಯಾಂಗ್‌ರೇಪ್ ಕೇಸ್, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | JANATA NEWS

ಹಾವೇರಿ : ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹಾವೇರಿ ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಹಾನಗಲ್ ಗ್ಯಾಂಗರೇಪ್ ಪ್ರಕರಣದ ಸಂತ್ರಸ್ಥೆ ಮಹಿಳೆಯ ಪರಿವಾರಕ್ಕೆ ಭೇಟಿಯಾದರು.
ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಅವರಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಅಂತಾ ಹಿಂತಾ ಯಾವುದೆ ಪ್ರಕರಣಕ್ಕೂ ಸರ್ಕಾರ ಕ್ಷಮಿಸಿಲ್ಲ. ಆರೋಪಿಗಳಿಗೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಯಿತ್ತಿದೆ. ರಾಜ್ಯ ಸರ್ಕಾರಕ್ಕೆ ಸಂತ್ರಸ್ಥೆ ಮಹಿಳಿಗೆ ನ್ಯಾಯ ಒದಗಿಸುತ್ತದೆ. ಪರಿಹಾರದ ನೀಡುವ ಕುರಿತು ಅವರ ಮನವಿ ಮಾಡಿದ್ದಾರೆ. ಮನವಿ ಪತ್ರ ಪರಿಶೀಲನೆ ಮಾಡಿ ಅವರಿಗೆ ಪರಿಹಾರ ನೀಡುವ ಬಗ್ಗೆ ಕ್ರಮವಾಗುತ್ತೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದರು.
ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನೂ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ, ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡೋದಿಲ್ಲ. ಯಾವುದೇ ಧರ್ಮಕ್ಕೆ ಸೇರಿದವರಾಗಲಿ ಜಾತಿಗೆ ಸೇರಿದವರಾಗಿದ್ದರೂ ಕ್ರಮ ಗ್ಯಾರಂಟಿ. ಈ ಕೇಸ್‌ನಲ್ಲಿ ಯಾರೇ ಕಾನೂನು ಕೈಗೆ ತೆಗೆದುಕೊಂಡಿದ್ದರೂ ಶಿಕ್ಷೆ ಕೊಡಿಸ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.