ಲೋಕಸಭಾ ಚುನಾವಣೆ : ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ - ಯತೀಂದ್ರ ಸಿದ್ದರಾಮಯ್ಯ | JANATA NEWS

ಹಾಸನ : ಲೋಕಸಭಾ ಚುನಾವಣೆ ಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮತ್ತೊಮ್ಮೆ ರಾಜ್ಯ ಕಾಂಗ್ರೆಸ್ ಸಿಎಂ ಅವಧಿಗೆ ಸಂಬಂಧಪಟ್ಟಂತ ಚರ್ಚೆಗೆ ಚಾಲನೆ ನೀಡಿದ ಯತೀಂದ್ರ ಸಿದ್ದರಾಮಯ್ಯ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ ಈ ಹೇಳಿಕೆಯನ್ನು ನೀಡಿದ್ದಾರೆ.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಇದನ್ನು ಲೋಕಸಭಾ ಚುನಾವಣೆಯಲ್ಲಿ ತೋರಿಸಬೇಕು. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದ್ದು ಮುಂದಿನ ಐದು ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಯಲು ಸಾಧ್ಯವಾಗುತ್ತದೆ. ಹಾಗಾಗಿ ನಿಮ್ಮ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.