Mon,Apr13,2026
ಕನ್ನಡ / English

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ : ರಾಜ್ಯದಲ್ಲಿ ಕಟ್ಟೆಚ್ಚರ | JANATA NEWS

20 Jan 2024

ಬೆಂಗಳೂರು : ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದುಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.

ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ.

ದೇವರು - ಧರ್ಮ - ಪೂಜೆ - ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು - ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ.

English summary :Ayodhya Ram Mandir Pranpratishta : Strict vigilance in state

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...