ದುರಂತಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ! | JANATA NEWS

ಗದಗ : 2024 ರಲ್ಲಿ ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. ಯುದ್ಧದ ಭೀತಿ ಇದೆ. 2024 ಜಗತ್ತಿಗೆ ಕಂಟಕವಾಗಲಿದೆ ಎಂದು ಗದಗನಲ್ಲಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆ ಎಂದು ಸ್ವಾಮಿಜಿ ನುಡಿದಿದ್ದಾರೆ. ಜಗತ್ತಿಗೆ ವಿನಾಶ, ಜಗತ್ತಿಗೆ ಅಪಾಯ, ರೋಗ, ಸುನಾಮಿ ಹಾಗೂ ಮತೀಯ ಸಮಸ್ಯೆಯಿಂದ ಜನರು ದುಖಃ ಅನುಭವಿಸುತ್ತಾರೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಬಾಂಬ್ ಸಿಡಿದು ನೂರಾರು ಜನರು ಅಸುನೀಗುವ ಸಾಧ್ಯತೆಯಿದೆ. ಅಲ್ಲದೇ ಇದರೊಂದಿಗೆ ಪ್ರಕೃತಿ ಮುನಿದು ಭೂಕಂಪ, ಜಲಕಂಟಕ ಎದುರಾಗುತ್ತದೆ ಎಂದು ಮುಂಬರುವ ದಿನಗಳು ಭಯಾನಕವಾಗಿರಲಿವೆ ಎಂದು ಎಚ್ಚರಿಸಿದ್ದಾರೆ.
2024ರ ವರ್ಷ ಭಯಾನಕ ಅನುಭವನ್ನು ನೀಡಲಿದೆ. ಈ ವರ್ಷ ಜಗತ್ತಿನಾದ್ಯಂತ ಒಂದೆರಡು ಪ್ರಧಾನಿಗಳ ಸಾವಾಗುವ ಲಕ್ಷಣವಿದೆ. ಮತೀಯ ಸಮಸ್ಯೆಯಿಂದ ಜನರು ದುಃಖ ಅನುಭವಿಸುತ್ತಾರೆ. ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ. ದೇಶದಲ್ಲಿ ಅಸ್ಥಿರತೆ, ಯುದ್ಧ ಭೀತಿ, ಅಣುಬಾಂಬ್ ಸ್ಫೋಟಗೊಳ್ಳುವ ಅವಕಾಶವಿದೆ. ಇದರೊಂದಿಗೆ ಜಗತ್ತಿಗೆ ಮತ್ತೊಮ್ಮೆ ರೋಗ ಹರಡುವ ಸಾಧ್ಯತೆ ಜೊತೆಗೆ ದೊಡ್ಡ ಸುನಾಮಿಯೊಂದು ಎದ್ದು ಜಗತ್ತಿಗೆ ಅಪಾಯವಾಗಲಿದೆ. ದೈವ ನಂಬುವುದೊಂದೇ ಪರಿಹಾರ. ದೈವದ ಮೊರೆ ಹೋಗಬೇಕು ಎಂದು ಸಲಹೆ ನೀಡಿದ್ದಾರೆ.