Mon,Apr13,2026
ಕನ್ನಡ / English

ಸಿಎಂ ಸಿದ್ದರಾಮಯ್ಯ ವಜಾಕ್ಕೆ ಕುಮಾರಸ್ವಾಮಿ ಆಗ್ರಹ, ಯಾಕೆ ಗೊತ್ತಾ? | JANATA NEWS

28 Jan 2024

ಬೆಂಗಳೂರು : ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಷ್ಟ್ರಪತಿಗಳ ವಿರುದ್ಧ ಸಿಎಂ ಏಕವಚನ ಪ್ರಯೋಗಿಸಿದ್ದಕ್ಕೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಜೊತೆ ಸರಣಿ ಟ್ವೀಟ್ ಮಾಡಿರೋ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಅಂತ ಆಗ್ರಹಿಸಿದ್ದಾರೆ.

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ ಎಂದು ಎಚ್ಡಿಕೆ ಕಿಡಿಕಾರಿದ್ದಾರೆ.

ಡೋಂಗಿ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಎಂದು ಒತ್ತಾಯಿಸಿದ್ದಾರೆ.

ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯ ಅವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆಯ ದಿನ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ, ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

RELATED TOPICS:
English summary :Kumaraswamy demands CM Siddaramaiah dismissal, do you know why?

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...