Wed,Apr17,2024
ಕನ್ನಡ / English

ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರದಿಂದ ಜಿಲ್ಲೆಗಳ ನಡುವೆ ನೀರಿನ ಜಗಳ ಸೃಷ್ಟಿ | JANATA NEWS

14 Mar 2024
2175

ಬೆಂಗಳೂರು : ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ ನಮ್ಮ ರಾಜ್ಯದಲ್ಲಿ ಜಿಲ್ಲೆ ಜಿಲ್ಲೆಗಳ ನಡುವೆ ನೀರಿನ ಜಗಳ ತಂದಿಡುತ್ತಿದೆ.. ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಕಿ ಹಾಕುತ್ತಿರುವುದು ನೀಚತನದ ಪರಮಾವಧಿ, ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಹೇಳಿರುವ ಕುಮಾರಸ್ವಾಮಿ ಅವರು, "ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ ನಮ್ಮ ರಾಜ್ಯದಲ್ಲಿ ಜಿಲ್ಲೆ ಜಿಲ್ಲೆಗಳ ನಡುವೆ ನೀರಿನ ಜಗಳ ತಂದಿಡುತ್ತಿದೆ. ಹಾಸನ ಮತ್ತು ತುಮಕೂರಿನಲ್ಲಿ ಅಂತದ್ದೇ 'ಜಲತಂಟೆ' ಪ್ರಯೋಗಿಸುತ್ತಿದೆ."

"ಹಾಸನ ಜಿಲ್ಲೆ ಜನರು ಎಂದೂ ತುಮಕೂರಿಗೆ ನೀರು ಕೊಡುವುದನ್ನು ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ. ನಮಗೂ ನೀರು ಕೊಡಿ ಎಂದಷ್ಟೇ ಕೇಳುತ್ತಿದ್ದಾರೆ. ಅಕ್ಕಪಕ್ಕದ ಜಿಲ್ಲೆಗಳ ಜನರು ಎಂದರೆ ಅವಳಿ-ಜವಳಿ ಮಕ್ಕಳಂತೆ. ಅಂಥ ಮಕ್ಕಳ ನಡುವೆಯೇ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಕಿ ಹಾಕುತ್ತಿರುವುದು ನೀಚತನದ ಪರಮಾವಧಿ."

"ನಾನು ನಿನ್ನೆ ಹಾಸನಕ್ಕೆ ಹೋಗಿದ್ದೆ. ಅಲ್ಲಿನ ಪರಿಸ್ಥಿತಿ ಏನಿದೆ ಎನ್ನುವುದನ್ನು ತಿಳಿದುಕೊಂಡೆ. ತುಮಕೂರಿನ ಪರಿಸ್ಥಿತಿಯೂ ಕಷ್ಟವಿದೆ ಎನ್ನವುದೂ ನನಗೆ ಗೊತ್ತು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಹೇಮಾವತಿ ತಾಯಿ ರಾಜಕೀಯ ದಾಳವಾಗಿದ್ದಾಳೆ. ಪೊಲೀಸ್ ರಾಜ್ ಸೃಷ್ಟಿಸಿ ಜನರ ದನಿ ಹುಡುಗಿಸುವ ಯತ್ನ ನಡೆಸಿದೆ."

"ನಾಲೆ ಉದ್ದಕ್ಕೂ ಪೊಲೀಸ್ ಪಹರೆ ಹಾಕಿರುವುದು ಈ ಸರಕಾರ ನಮ್ಮ ಜನರ ಬಗ್ಗೆ ಹೊಂದಿರುವ ಕೀಳು ಮನಃಸ್ಥಿತಿಯನ್ನು ತೋರಿಸುತ್ತದೆ. ಪಹರೆ ಹಾಕಿ ನೀರು ಹರಿಸುವ ವರ್ತನೆ ಎರಡೂ ಜಿಲ್ಲೆಗಳ ಜನರಿಗೆ ಮಾಡುವ ಘೋರ ಅಪಮಾನ."

"ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡ ಅವರೂ ಕೆಲ ದಿನಗಳ ಹಿಂದೆಯೇ ಹಾಸನಕ್ಕೂ ನೀರು ಕೊಡಿ, ಬೇರೆಯವರಿಗೂ ನೀರು ಕೊಡಿ ಎಂದು ಹೇಳಿದ್ದರು. ಈ ಕಡು ಬರದಲ್ಲಿ ಹನಿನೀರಿಗೆ ಎಷ್ಟು ತತ್ವಾರವಿದೆ ಎನ್ನುವುದು ಸರಕಾರಕ್ಕೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದರು. ಇನ್ನೊಬ್ಬರ ಮಾತು ಕೇಳುವ ವ್ಯವಧಾನ ಸರಕಾರಕ್ಕೆ ಇಲ್ಲದಾಗಿದೆ.", ಎಂದು ವಾಗ್ದಾಳಿ ನಡೆಸಿದ್ದಾರೆ.

English summary :Cong Govt creating water fight between districts, to secretly drains Cauvery water Tamil Nadu

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ನ್ಯೂಸ್ MORE NEWS...