Tue,Mar10,2026
ಕನ್ನಡ / English

ನನ್ನದು ಗರ್ವ ಅಲ್ಲ, ಕನ್ನಡಿಗನ ಸ್ವಾಭಿಮಾನ: ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು | JANATA NEWS

30 Mar 2024

ಬೆಂಗಳೂರು : ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಶನಿವಾರ ಮಾತನಾಡಿರುವ ಅವರು, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ತಿಳಿಸಿದ್ದಾರೆ.

ದೇವೇಗೌಡರೇ ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ. ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನಃ ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ.

ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ "ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ" ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ"ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ" ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ? Narendra Modi ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸು ಬರುತ್ತಿದೆ.

ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ. ಆದರೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿದ್ದಾರೆ.

RELATED TOPICS:
English summary :It s not my pride, it is Kannadigas self-esteem: CM Siddaramaiah hits back at Deve Gowda

ಅನಿಲ ಸರಬರಾಜು ಕಡಿತ; ಬೆಂಗಳೂರಿನಲ್ಲಿರುವ ಹೋಟೆಲ್‌ಗಳು ನಾಳೆಯಿಂದ ಬಂದ್ - ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.
ಅನಿಲ ಸರಬರಾಜು ಕಡಿತ; ಬೆಂಗಳೂರಿನಲ್ಲಿರುವ ಹೋಟೆಲ್‌ಗಳು ನಾಳೆಯಿಂದ ಬಂದ್ - ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.
ಇಂತಹ ಬೇಜವಾಬ್ದಾರಿ ವಿರೋಧ ಪಕ್ಷವನ್ನು ಹಿಂದೆಂದೂ ನೋಡಿಲ್ಲ - ಸಂಸತ್ತಿನಲ್ಲಿ ವಿರೋಧ ಪಕ್ಷದ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿ
ಇಂತಹ ಬೇಜವಾಬ್ದಾರಿ ವಿರೋಧ ಪಕ್ಷವನ್ನು ಹಿಂದೆಂದೂ ನೋಡಿಲ್ಲ - ಸಂಸತ್ತಿನಲ್ಲಿ ವಿರೋಧ ಪಕ್ಷದ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿ
ನ್ಯೂಜಿಲೆಂಡ್ ವಿರುದ್ಧದ ಪ್ರಬಲ ಫೈನಲ್ ನಲ್ಲಿ 2026 ರ ಐಸಿಸಿ ಟಿ 20 ವಿಶ್ವಕಪ್ ಗೆದ್ದ ಭಾರತ
ನ್ಯೂಜಿಲೆಂಡ್ ವಿರುದ್ಧದ ಪ್ರಬಲ ಫೈನಲ್ ನಲ್ಲಿ 2026 ರ ಐಸಿಸಿ ಟಿ 20 ವಿಶ್ವಕಪ್ ಗೆದ್ದ ಭಾರತ
ಯುಎಇ ವಿಮಾನ ನಿಲ್ದಾಣಗಳಲ್ಲಿ ಅನಧಿಕೃತ ಚಿತ್ರೀಕರಣದ ವಿರುದ್ಧ ಭಾರತೀಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಯುಎಇ ವಿಮಾನ ನಿಲ್ದಾಣಗಳಲ್ಲಿ ಅನಧಿಕೃತ ಚಿತ್ರೀಕರಣದ ವಿರುದ್ಧ ಭಾರತೀಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಪಶ್ಚಿಮ ಬಂಗಾಳ ಟಿಎಂಸಿ ಸರ್ಕಾರವನ್ನು ಆಡಳಿತದ ಕಾಳಜಿಗಳ ಬಗ್ಗೆ ಟೀಕಿಸಿದ ರಾಷ್ಟ್ರಪತಿ ಮುರ್ಮು
ಪಶ್ಚಿಮ ಬಂಗಾಳ ಟಿಎಂಸಿ ಸರ್ಕಾರವನ್ನು ಆಡಳಿತದ ಕಾಳಜಿಗಳ ಬಗ್ಗೆ ಟೀಕಿಸಿದ ರಾಷ್ಟ್ರಪತಿ ಮುರ್ಮು
ಭಾರತ ಸರ್ಕಾರ  ಅಮೂಲ್ಯ ಬೆಂಬಲ ಮತ್ತು ಸಹಕಾರಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಇರಾನ್ ರಾಯಭಾರಿ
ಭಾರತ ಸರ್ಕಾರ ಅಮೂಲ್ಯ ಬೆಂಬಲ ಮತ್ತು ಸಹಕಾರಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಇರಾನ್ ರಾಯಭಾರಿ
ಪಾಕಿಸ್ತಾನದ ಸೇನಾ ಸರಕು ವಿಮಾನವನ್ನು ಹೊಡೆದುರುಳಿಸಿದ ಅಫ್ಘಾನಿಸ್ತಾನ
ಪಾಕಿಸ್ತಾನದ ಸೇನಾ ಸರಕು ವಿಮಾನವನ್ನು ಹೊಡೆದುರುಳಿಸಿದ ಅಫ್ಘಾನಿಸ್ತಾನ
ಟೆಕ್ಕಿ ಆತ್ಮಹತ್ಯೆ : ವರದಕ್ಷಿಣೆ ಕಿರುಕುಳ ಆರೋಪ, ಪತಿ ಬಂಧನ
ಟೆಕ್ಕಿ ಆತ್ಮಹತ್ಯೆ : ವರದಕ್ಷಿಣೆ ಕಿರುಕುಳ ಆರೋಪ, ಪತಿ ಬಂಧನ
ಇರಾನ್ ನ ದಶಕಗಳ ಕರಾಳ ಸತ್ಯ ಹಂಚಿಕೊಂಡ ಇರಾನಿನ ನಟಿ ಎಲ್ನಾಜ್ ನೊರೌಜಿ
ಇರಾನ್ ನ ದಶಕಗಳ ಕರಾಳ ಸತ್ಯ ಹಂಚಿಕೊಂಡ ಇರಾನಿನ ನಟಿ ಎಲ್ನಾಜ್ ನೊರೌಜಿ
ಎಕ್ಸ್ ಮುಸ್ಲಿಂ ಸಲೀಂ ವಾಸ್ಟಿಕ್ ಪ್ರಕರಣ : ಇಬ್ಬರೂ ದಾಳಿಕೋರರನ್ನು ಎನ್‌ಕೌಂಟರ್‌ನಲ್ಲಿ ಕೊಂದ ಯುಪಿ ಪೊಲೀಸರು
ಎಕ್ಸ್ ಮುಸ್ಲಿಂ ಸಲೀಂ ವಾಸ್ಟಿಕ್ ಪ್ರಕರಣ : ಇಬ್ಬರೂ ದಾಳಿಕೋರರನ್ನು ಎನ್‌ಕೌಂಟರ್‌ನಲ್ಲಿ ಕೊಂದ ಯುಪಿ ಪೊಲೀಸರು
ಭಾರತದಲ್ಲಿ ಕೇವಲ 25 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ತೈಲ ದಾಸ್ತಾನು
ಭಾರತದಲ್ಲಿ ಕೇವಲ 25 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ತೈಲ ದಾಸ್ತಾನು
ಕಳೆದ 48 ಗಂಟೆಗಳಲ್ಲಿ 8 ದೇಶಗಳ ನಾಯಕರಿಗೆ ಕರೆ : ಭಾರತೀಯರ ಸುರಕ್ಷತೆ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ
ಕಳೆದ 48 ಗಂಟೆಗಳಲ್ಲಿ 8 ದೇಶಗಳ ನಾಯಕರಿಗೆ ಕರೆ : ಭಾರತೀಯರ ಸುರಕ್ಷತೆ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...