ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ! | JANATA NEWS
ಬೆಂಗಳೂರು : ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ಸಂಸದೆ ಸುಮಲತಾ ಅವರ ನಿವಾಸಕ್ಕೆ ಭೇಟಿ ನೀಡಿದರು. ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್ ಅವರು ಹಾಜರಿದ್ದರು.
ಸುಮಲತಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್‌ಡಿಕೆ, ಇವತ್ತಿನ ಮಾತುಕತೆ ಸೌಹಾರ್ದಯುತವಾಗಿ ಆಗಿದೆ. ಮಾತುಕತೆ ವೇಳೆ ಯಾವುದೇ ಷರತ್ತು ಹಾಕಿಲ್ಲ ಎಂದು ಹೇಳಿದ್ದಾರೆ.
ಇಂದು ಭಾನುವಾರ ಜೆಪಿ ನಗರದ ಸಂಸದೆ ಸುಮಲತಾ ಅವರ ಮನೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಈ ವೇಳೆ ಅವರನ್ನು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಪುತ್ರ ಅಭಿಷೇಕ್ ಅಂಬರೀಶ್ ಸ್ವಾಗತಿಸಿದರು. ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ನಾಯಕ ಟಿಎ ಶರವಣ ಸಹ ಇದ್ದರು.
ಸುಮಲತಾ ಭೇಟಿ ಬಳಿಕ ಸುದ್ದಿಗಾರ ಜೊತೆಗೆ ಎಚ್‌ಡಿ ಕುಮಾರಸ್ವಾಮಿ ಅವರು, ಸುಮಲತಾ ಅವರ ನಿವಾಸಕ್ಕೆ ತೆರಳಿ ಬೆಂಬಲ ಕೇಳಿದ್ದೇನೆ. ಇಂದಿನ ಭೇಟಿ ಇದು ಸೌಹಾರ್ದಯುತ ಭೇಟಿ ಆಗಿದೆ. ನಾನು ಅಂಬರೀಶ್ ಅವರು ರಾಜಕಾರಣಲ್ಲಿ ಒಟ್ಟೊಟ್ಟಿಗೆ ಬೆಳೆದವರು. ಅವರ ಸಹಕಾರ ಕೇಳಿದ್ದೇನೆ. ಅವರು ಏಪ್ರಿಲ್ 3ರಂದು ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
ನಾನು ಮಂಡ್ಯದಲ್ಲಿ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಈ ನಿಟ್ಟಿನಲ್ಲಿ ನಾನು ಅವರು ಸಹಾಯ ಕೇಳಿದ್ದೇನೆ. ಅವರ ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿ ಅವರ ಸಮ್ಮುಖದಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ. ಸುಮಲತಾ ಅವರು ಬಿಜೆಪಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ತಿಳಿಸಿದರು.