ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ | JANATA NEWS
ಚಾಮರಾಜನಗರ : ಕರ್ನಾಟಕದ ಗಡಿನಾಡು ಜಿಲ್ಲೆ ಚಾಮರಾಜನಗರದ ನಂಜನಗೂಡುನಲ್ಲಿ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಮಂಗಳವಾರ (ಏಪ್ರಿಲ್ 2) 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂದಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರ ಚುರುಕುಗೊಳ್ಳುತ್ತಿದ್ದಂತೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಂಜನಗೂಡು ಇಮ್ಮಾವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೀವರೀಸ್ ಘಟಕಕ್ಕೆ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ, 98.52 ಕೋಟಿ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ, ಎಂದು ವರದಿಯಾಗಿದೆ.
ಅನಾಮಧೇಯ ದೂರವಾಣಿ ಕರೆಯ ಮೇರೆಗೆ ಜಿಲ್ಲಾ ಚುನಾವಣಾಧಿಕಾರಿ ನೀಡಿದ ಮೌಖಿಕ ಆದೇಶದನ್ವಯ ಹಠಾತ್ ದಾಳಿ ನಡೆಸಿ ಘಟಕದ ದಾಖಲಾತಿ ಹಾಗು ಲೆಕ್ಕದ ಪುಸ್ತಕದೊಂದಿಗೆ ಭೌತಿಕ ದಾಸ್ತಾನನ್ನು ಪರಿಶೀಲಿಸಲಾಗಿತ್ತು. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರೂ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು, ಎನ್ನಲಾಗಿದೆ.
ಈ ಸಂದರ್ಭದಲ್ಲಿ ಒಟ್ಟು 98.52 ಕೋಟಿ ರೂಪಾಯಿ ಮೌಲ್ಯದ ಮದ್ಯ ವಶಪಡಿಸಲಾಗಿದೆ. ಬ್ರೇವರಿ ಘಟಕದ ವಿರುದ್ದ ಪ್ರಕರಣ ದಾಖಲಾಗಿದೆ.