ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ | JANATA NEWS
ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಇದೀಗ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ವೇಳೆಗೆ ನಗರದ ಹಲವೆಡೆ ಗುಡುಗು ಸಹಿತ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಏಪ್ರಿಲ್ 22 ರವರೆಗೆ ಬೆಂಗಳೂರು ನಗರದ ಹಲವೆಡೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಏ.22 ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.