ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ | JANATA NEWS
ಬೆಂಗಳೂರು : ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ ಈಗ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಎಸ್ಐಟಿ (SIT) ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿಯಿಂದ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ' ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.