ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು - ಸಿಎಂ ಸಿದ್ದರಾಮಯ್ಯ | JANATA NEWS
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಆಕಾಂಕ್ಷಿ ಎಂಬುವಂತೆ ಹೇಳಿಕೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಹೈಕಮಾಂಡ್ ನವರು ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು ಹಾಗೂ ಎಂ.ಎಲ್.ಸಿ ಮಾಡುವುದಾಗಿ ತಮಗೆ ಹೇಳಿದ್ದರು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
"ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ", ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ನಲ್ಲಿ ಬರೆದಿರುವ ಅವರು, "ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ. ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ."
"ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ."
"ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು.", ಎಂದು ಸರಣಿ ಪೋಸ್ಟ್ ನಲ್ಲಿ ಬರೆದಿದ್ದಾರೆ.
ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. 2/4#ಮೈಸೂರು #ಮಾಧ್ಯಮಹೇಳಿಕೆ
— Siddaramaiah (@siddaramaiah) May 24, 2024