Sat,Mar15,2025
ಕನ್ನಡ / English

ಸಿದ್ದರಾಮಯ್ಯ ಅವರೇ ನಿಮ್ಮ ಸುಪುತ್ರ..ರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿ.. ಅವರ ಸಾವಿಗೆ ಕಾರಣರಾದಿರಿ.. - ಹೆಚ್.ಡಿ.ಕೆ | JANATA NEWS

25 May 2024
958

ಬೆಂಗಳೂರು : ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ?, ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಯೊಂದನ್ನು ಉಲ್ಲೇಖಿಸಿರುವ ಎಚ್.ಡಿಕೆ ಅವರು, "ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ.. ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ.", ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಬಹಿರಂಗ ಪತ್ರ ಬರೆದಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು,
""ಶ್ರೀ ಸಿದ್ದರಾಮಯ್ಯ ನವರೇ..
ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ.

"ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ" ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ.

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ.

ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವುಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ.

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೆಗೌಡ, Broker ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ..?

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ 'ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು' ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ?

ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ; ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ ನೀವು ಹೇಳಿದ್ದೇನು? ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ..

ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ.

ಇನ್ನು, SIT ತನಿಖೆ ಅಂತೀರಾ? SIT ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್ ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್ ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ?

ಕೊನೆಯದಾಗಿ; ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ.. ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ."" ಎಂದು ಬರೆದಿದ್ದಾರೆ.

English summary :Siddaramaiah himself, sent his son to a drunken party called Tomorrow Land.. You caused his death.. - H.D.K.

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...