ಅವರನ್ನ ಮೆಂಟಲ್ ಆಸ್ಪತ್ರೆಗೆ ಕಳಿಸಿಕೊಡೋಣ : ಜಾರಕಿಹೊಳಿಗೆ ತಿರುಗೇಟು ನೀಡಿದ ಡಿಕೆಶಿ | JANATA NEWS

ಬೆಂಗಳೂರು : ಬೆಳಗಾವಿ ಭಾಗದಲ್ಲಿ ಸೋಲಿಗೆ ಡೈರೆಕ್ಟರ್ ಹಾಗೂ ಪ್ರೊಡ್ಯೂಸರ್ ಕಾರಣ ಎಂದು ಹೇಳಿದ್ದಾರೆ ಎಂದು ಕೇಳಿದ್ದಕ್ಕೆ, ಅವರನ್ನ ಮೆಂಟಲ್ ಆಸ್ಪತ್ರೆಗೆ ಕಳಿಸಿಕೊಡೋಣ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹೇಳಿರುವ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಜಾರಕಿಹೊಳಿ ಅವರ ಹೇಳಿಕೆ ಕುರಿತು ನಿರ್ಮಾಪಕರು ಪ್ರೊಡ್ಯೂಸರ್ ಯಾರು ಸಾರ್ ಎಂದು ಮಾಧ್ಯಮದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಪಾಳಯದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಡಿಕೆಶಿವಕುಮಾರ್ ಅವರ ಈ ಹೇಳಿಕೆ ಸಾಕಷ್ಟು ಸಂಚಲನ ಸೃಷ್ಟಿಸಿದೆ.
ಕಾಂಗ್ರೆಸ್ ಸೋಲಿಗೆ ಬಗ್ಗೆ ಮಾತನಾಡಿದ್ದ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರಾದ ಸತೀಶ್ ಜಾರಕಿಹೊಳಿ, ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಆಗಿರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಲೋಕಸಭಾ ಚುಣಾವಣೆಯಲ್ಲಿ ಕರ್ನಾಟಕ ರಾಜ್ಯ ಆಡಳಿತ ಪಕ್ಷ ಕಾಂಗ್ರೆಸ್ ನಿರೀಕ್ಷಿಸಿದಷ್ಟು ಸ್ಥಾನಗಳನ್ನ ಪಡೆಯಲು ವಿಫಲವಾಗಿರುವುದು ಹೊಸ ರಾಜಕೀಯ ಚದುರಂಗದಾಟಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಗಿಂತ ಭಾರಿ ಉತ್ತಮ ಫಲಿತಾಂಶ ಪಡೆದರೂ, ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆ ಹಾಕಿಕೊಂಡಿದ್ದ ಕೈ ಪಕ್ಷ ಕೇವಲ 9 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ.